You are currently browsing the category archive for the ‘Uncategorized’ category.

Reblogged from ಅಲ್ಲಿದೆ ನಮ್ಮ ಮನೆ:

Last year, Al Gore was nominated for the Nobel Peace Prize for the year 2007 was announced, for supporting the cause of the environment.   His film “An inconvenient Truth” has won an Academy award as well. Although I haven’t seen that film, I really appreciate Al Gore for the concern he is showing on the Earth’s environment.

What is this ‘

Read more… 788 more words

For Earth Day 2013 - Reposting this old post:

Reblogged from ಅಲ್ಲಿದೆ ನಮ್ಮ ಮನೆ:

ನಾನು ಚಿಕ್ಕವನಾಗಿದ್ದಾಗಿಂದ ಪರೀಕ್ಷೆ ಮುಗಿದು ಬರುವ ಬೇಸಿಗೆ ರಜೆಗೆ ಕಾಯುತ್ತಿರುತ್ತಿದ್ದೆ. ಏಕೆಂದರೆ, ವರ್ಷದಲ್ಲಿ ಒಮ್ಮೆ ಮಾಡುತ್ತಿದ್ದ ರೈಲ್ವೆ ಪ್ರಯಾಣ ಆಗ ಬರುತ್ತಿತ್ತು. ಎಲ್ಲ ಮಕ್ಕಳಿಗೂ, ರೈಲು ಪ್ರಯಾಣ ಎಂದರೆ ಹೆಚ್ಚೇ ಆಸೆ ಎಂದು ನನ್ನೆಣಿಕೆ. ಆದರೆ, ನನ್ನ ಈ ರೈಲು ಪ್ರಯಾಣ ಮಾತ್ರ ಬಹಳ ದೂರದ್ದಾಗಿರಲಿಲ್ಲ. ಆಗ ನಮ್ಮ ಊರಿಗೆ, (ಎಂದರೆ, ನನ್ನ ಪೂರ್ವಿಕರ ಊರಿಗೆ), ನನ್ನ ಊರಿಂದ (ಎಂದರೆ ಯಾವಾಗಲೂ ಯಾವಾಗಲೂ ನನ್ನ ಊರು ಯಾವುದು ಎಂದು ನಾನೆಂದುಕೊಳ್ಳುತ್ತೇನೋ) ಇದ್ದದ್ದು ಬರೀ ರೈಲು ಮಾತ್ರ. ಅರಸೀಕೆರೆಯಿಂದ ಮೈಸೂರಿಗೆ ಹೋಗುವ ದಾರಿಯಲ್ಲಿ ಐದು ಆರು ಮೈಲಿ ದಾಟಿ ಸಿಕ್ಕುತ್ತಿದ್ದಿದ್ದೇ ನಮ್ಮ ಹಳ್ಳಿ. ನಮ್ಮ ಅಜ್ಜ ಅಜ್ಜಿ ವಾಸ ಮಾಡುತ್ತಿದ್ದ ಮನೆ ಇದೆ ಅಲ್ಲಿ. ನನಗೆ ನೆನಪಿದ್ದಾಗಿನಿಂದ, ಅವರು ನಮ್ಮ ಮನೆಯಲ್ಲೇ ಇದ್ದುದ್ದರಿಂದ, ನನಗೆ ಅದು ಅಜ್ಜ-ಅಜ್ಜಿ ಮನೆ ಅನ್ನಿಸದೇ, ಒಂದು ರಜಾ ಕಾಲದ ಮನೆಯಾಗಿರುತ್ತಿತ್ತು.

ಈ ಹದಿನೈದು ನಿಮಿಷದ ರೈಲು ಪ್ರಯಾಣಕ್ಕೆ ಯಾಕಪ್ಪಾ ಅಷ್ಟು ಉತ್ಸಾಹ ಎಂದಿರಾ? ಇನ್ನೆಲ್ಲಿಗೆ ಹೋಗಬೇಕಾಗಿದ್ದರೂ ಬಸ್ಸನ್ನೇ ಹಿಡಿಯುತ್ತಿದ್ದ ನಾವು ಇಲ್ಲಿಗೆ ಮಾತ್ರ ರೈಲು ಹಿಡಿಯುತ್ತಿದ್ದಿದ್ದು ಒಂದಾದರೆ, ಹಳ್ಳಿಯಲ್ಲಿ ಹೋಗಿ ಆರೆಂಟು ದಿನ ಇರುತ್ತೇವಲ್ಲ ಎನ್ನುವುದು ಇನ್ನೊಂದು ಕಾರಣ ಇರಬೇಕು. ಮತ್ತೆ ಅದಕ್ಕಿಂತ ಹೆಚ್ಚಿಗೆ, ಊರಿನಲ್ಲಿದ್ದ ನಮ್ಮ ಮನೆಯಲ್ಲಿ ವರ್ಷ ಪೂರ್ತಿ ಯಾರೂ ವಾಸ ಇರುತ್ತಿದ್ದಿಲ್ಲ. ಅದಕ್ಕೆ, ನಾವು ಎಂಟು ದಿನ ಒಂದು ಸಂಸಾರ ನಡೆಸಬೇಕಾದರೆ ಬೇಕಾಗುವಷ್ಟು ವಸ್ತುಗಳೆಲ್ಲ - ಅಂದರೆ ಪಾತ್ರೆ ಪರಟಿ, ದವಸ ದಿನಸಿ, ಉಪ್ಪು ಮೆಣಸು ಪ್ರತಿಯೊಂದನ್ನೂ ಕಟ್ಟಿಕೊಂಡು ಹೊರಡುತ್ತಿದ್ದೆವು. ಅದರ ಸಂಭ್ರಮವೇ ಸಂಭ್ರಮ ನನಗೆ! ಮತ್ತೆ ಮಧ್ಯಾಹ್ನ ಹತ್ತಿರದಲ್ಲೇ ಇದ್ದ ರಂಗೋಲಿ ಗುಂಡಿಯಲ್ಲಿ ಮಜೀದ್ ಸಾಬರನ್ನೋ, ಅವರ ಅಣ್ಣನನ್ನೋ ಹೋಗಿ, ಮೂರುಗಂಟೆಗೆ ಕುದುರೆಗಾಡಿಯೊಂದಿಗೆ ಬರಬೇಕು ಅಂತ ಕರೆದುಬರುತ್ತಿದ್ದೆ. ಆಗಿನ್ನೂ ಆಟೋರಿಕ್ಷಾಗಳೂ ಬಹಳ ಹೆಚ್ಚಿರಲಿಲ್ಲ. ಇದ್ದರೂ, ನಮ್ಮ ಎಂಟು ದಿನದ ಸಂಸಾರಕ್ಕೆ ಬೇಕಾಗುವ ಸಾಮಾನೆಲ್ಲ ಎತ್ತಿಕೊಂಡು ಹೋಗಲು ನಾಲ್ಕಾದರೂ ಆಟೋರಿಕ್ಷಾಗಳು ಬೇಕಾಗಿರುತ್ತಿದ್ದವೇನೋ! ಹಾಗಾಗಿ, ಮಜೀದ್ ಸಾಹೇಬರ ಕುದುರೆ ಗಾಡಿಯೇ ನಮಗೆ ಕಟ್ಟಿಟ್ಟದ್ದಾಗಿತ್ತು. ನನ್ನ ಅಜ್ಜ ತಾವು ಸಾಕಿದ್ದ ಕೊನೆಯ ಕೆಲವು ಕುದುರೆಗಳನ್ನೂ ಮಜೀದ್ ಸಾಬರ ತಂದೆಗೋ ಅಣ್ಣನಿಗೂ ಮಾರಿದ್ದೂ ಈ ನಂಟಿಗೆ ಕಾರಣವಾಗಿತ್ತೋ, ನನಗೆ ನೆನಪಿಲ್ಲ.

ಈ ಪ್ರಯಾಣವನ್ನು ನಾನು ಅಷ್ಟು ಹೆಚ್ಚು ಕಾಯುತ್ತಿದ್ದಿದ್ದಕ್ಕೆ ಇನ್ನೊಂದು ಕಾರಣವಿತ್ತು. ಊರಿನ ಮನೆಯಲ್ಲೊಂದು ಉಯ್ಯಾಲೆ ಮಣೆ ಇತ್ತು. ಪಟ್ಟಣವಾಸದ ನಮ್ಮ ಮನೆಯಲ್ಲಿ ಉಯ್ಯಾಲೆ ಎಲ್ಲಿ ಬರಬೇಕು? ಹಳ್ಳಿಯ ಮನೆಯಾದರೆ ದೇಶೋವಿಶಾಲವಾಗಿತ್ತು. ಹೋದ ಕೂಡಲೆ ಉಯ್ಯಾಲೆ ಹಾಕುವಂತೆ ನನ್ನ ತಂದೆಗೆ ದುಂಬಾಲು ಬೀಳುತ್ತಿದ್ದೆ ನಾನು. ಅದರಲ್ಲೋ, ಒಟ್ಟಿಗೆ ಇಬ್ಬರೋ ಮೂವರೋ ಕೂರಬಹುದಿತ್ತಷ್ಟೆ. ಹಾಗಾಗಿ, ಬೇರೆಯವರ ಜೊತೆ ಸ್ವಲ್ಪ ಜಗಳವಾಡೇ ಅಲ್ಲಿ ಅಧಿಕಾರ ಸ್ಥಾಪಿಸಿಕೊಳ್ಳುತ್ತಿದ್ದೆ ನಾನು. ಎಲ್ಲರಿಗಿಂತ ಕಿರಿಯವನಾಗಿದ್ದರಿಂದ, ನನ್ನ ಆಟವೂ ನಡೆಯುತ್ತಿತ್ತು ಎನ್ನಿ.

ನಮ್ಮ ಹಳ್ಳಿಯಲ್ಲಿ ಒಂದು ಲಕ್ಷ್ಮೀಕೇಶವನ ಗುಡಿ ಇದೆ. ಗುಡಿ ಸಾಧಾರಣದ್ದೇ ಆಗಿದ್ದರೂ, ದೇವರ ಮೂರ್ತಿ ಮಾತ್ರ ಬಹಳ ಸುಂದರ. ಇವೆಲ್ಲ ಹೊಯ್ಸಳರ ಕಾಲದ್ದೇ ಮೂರ್ತಿಗಳು ಅಂತ ಎಲ್ಲರೂ ಹೇಳ್ತಾರೆ. ಪ್ರತೀ ವರ್ಷ ಚೈತ್ರದ ಹುಣ್ಣಿಮೆಯ ದಿನ ಅಲ್ಲಿ ತೇರು. ತೇರಿಗೆ ಮೂರು ದಿವಸ ಮೊದಲು ಶುರುವಾಗುವ ಉತ್ಸವಗಳು, ಆಮೇಲೆ ಮತ್ತೊಂದು ವಾರದ ವರೆಗೂ ಇರುತ್ತವೆ. ನಾವು ಅಲ್ಲಿಗೆ ಹೋಗುತ್ತಿದ್ದಿದ್ದೂ ಇದೇ ಸಮಯದಲ್ಲೇ. ಹಾಗೇ ಸುಮಾರು ಎಲ್ಲರ ಮನೆಯಲ್ಲೂ ಊರಿನಿಂದ ಬಂದ ನೆಂಟರು ಇಷ್ಟರು ಇರುತ್ತಿದ್ದರು. ಹೀಗೆ, ವರ್ಷಕ್ಕೊಮ್ಮೆ ಸಿಕ್ಕುವ ಕೆಲವು ಗೆಳೆಯರಿದ್ದರು ನನಗೆ ಅಲ್ಲಿ.

ರಥೋತ್ಸವದ ದಿನ ಊರಿನಲ್ಲಿ ಸಡಗರವೋ ಸಡಗರ. ಎಲ್ಲ ಹೆಂಗೆಳೆಯರೂ ಮನೆಯಮುಂದೆ ಗುಡಿಸಿ ಸಾರಿಸಿ ರಂಗೋಲಿ ಹಾಕಿರುತ್ತಿದ್ದರು. ಆಗಿನ ನನ್ನ ಚಿಕ್ಕ ಕಣ್ಣುಗಳಿಗೆ, ಅವು ದೊಡ್ಡದಾಗಿ ತೋರುತ್ತಿದ್ದವೋ, ಅಥವಾ ನಿಜಕ್ಕೂ ಬಹಳ ದೊಡ್ಡ ರಂಗೋಲಿ ಚಿತ್ತಾರಗಳನ್ನು ಬಿಡಿಸುತ್ತಿದ್ದರೋ? ಯಾಕೋ ಬಗೆಹರಿಯುತ್ತಿಲ್ಲ. ಬೆಳಗ್ಗೆಯೇ ಒಂದು ಸಲ ದೇವರ ದರ್ಶನಕ್ಕೆ ಹೋಗಿರುತ್ತಿದ್ದೆವು. ನಂತರ ಅಲ್ಲೇ ಛತ್ರದಲ್ಲಿ ತಿಂಡಿ ತಿಂದು ಮನೆಗೆ ಬರುವಷ್ಟರಲ್ಲಿ ಬೇರೆ ಊರಿಂದ ರಥೋತ್ಸವಕ್ಕೆ ಬರುವ ಭಕ್ತರು ಊರಿಗೆ ಕಾಲಿಡತೊಡಗುತ್ತಿದ್ದರು. ಬಂದವರಿಗೆ ಊರಲ್ಲಿ ಯಾರದಾದರೂ ಪರಿಚಯವಿದ್ದರೆ ಅವರ ಮನೆಗೆ ಹೋದಾರು. ಇಲ್ಲದಿದ್ದರೂ ಚಿಂತೆಯಿಲ್ಲ. ತೇರಿನ ದಿನ, ಎಲ್ಲರ ಮನೆ ಬಾಗಿಲೂ ತೆರೆದೇ ಇರುವುದು. ಎಲ್ಲಿ ಹೋಗಿ ಬೇಕಾದರೂ ತಂಗಬಹುದು. ಬಂದವರಿಗೆಲ್ಲ ಆಯಾ ಮನೆಯವರ ಶಕ್ತ್ಯಾನುಸಾರ ಕಾಫಿಯದ್ದೋ ಪಾನಕದ್ದೋ ಸರಬರಾಜು ಆಗುತ್ತಲೇ ಇರುತ್ತಿತ್ತು. ನಮ್ಮ ಮನೆಗೂ ಹೀಗೇ ಐವತ್ತೋ ಅರವತ್ತೋ ಜನ ಬಂದಿರುತ್ತಿದ್ದರು. ಬಂದವರು ತಮ್ಮ ಚೀಲವನ್ನು ಇಟ್ಟು ದೇವರ ದರುಶನ ಮಾಡಿಕೊಂಡು ನಂತರ ಅಲ್ಲೇ ಜಗಲಿಯಲ್ಲೋ ಹಜಾರದಲ್ಲೋ ಹರಟುತ್ತ ಕೂತಿರುತ್ತಿದ್ದರು.

ಮಧ್ಯಾಹ್ನದ ವೇಳೆಗೆ ರಥ. ಊರಿನ ನಾಲ್ಕೂ ಬೀದಿಗಳಲ್ಲಿ ಅದರ ಸಂಚಾರ. ಸಾವಿರಾರು ಜನ ಸೇರಿ ಆ ಅಲಂಕರಿಸಿದ ಮಹಾರಥವನ್ನು ಎಳೆಯುವುದೇ ಒಂದು ರೋಮಾಂಚಕಾರಿ ಅನುಭವ. ಚಿಕ್ಕ ಹಳ್ಳಿಯ ರಸ್ತೆಯಾದ್ದರಿಂದ ಅದಕ್ಕೆ ಅಡೆತಡೆಗಳೂ ಹಲವು. ಜೋರಾಗಿ ಎಳೆದರೆ, ಒಂದು ಮೂಲೆಯಲ್ಲಿ ರಥ ಸುಮಾರು ಒಬ್ಬರ ಮನೆಯ ಮುಂದಿನ ತನಕ ಬಂದು ಬಿಡುತ್ತಿತ್ತು. ಇಷ್ಟೆಲ್ಲದರ ನಡುವೆಯೂ ರಥ ಊರಿನಲ್ಲಿ ಹೋಗುವಾಗ,

"ಡೋಲಾಯಮಾನಂ ಗೋವಿಂದಂ ಮಂಚಸ್ಥಂ ಮಧುಸೂಧನಂ
ರಥಸ್ಥ ಕೇಶವಂ ದೃಷ್ಟ್ವಾ ಪುನರ್ಜನ್ಮ ನ ವಿದ್ಯತೇ"

ಮಂಚದ ಮೇಲೋಲಾಡುತ್ತಿರುವಾ ಗೋವಿಂದನ ಮಧುವ ಮಡುಹಿದನ
ರಥದಲ್ಲಿರುವ ಕೇಶವನ ಕಂಡರೆ ಇರದೋ ಎಮಗೆ ಮರುಹುಟ್ಟು!

ಎಂದು ಹೇಳಿಕೊಳ್ಳುತ್ತಾ, ಹಿರಿಯರೆನ್ನದೆ ಕಿರಿಯರೆನ್ನದೆ ದೇವರಿಗೆ ಬಾಳೆ ಹಣ್ಣೆಸೆಯುವುದನ್ನು ನೋಡಿಯೇ ತೀರಬೇಕು.

ರಥೋತ್ಸವದ ಸಂಜೆಯ ಹೊತ್ತಿಗೆ ಬಂದವರೆಲ್ಲ ಹೊರಟಿರುತ್ತಿದ್ದರು. ನಂತರ ನನಗೆ ಉಳಿಯುತ್ತಿದ್ದುದು ದಿವಸಕ್ಕೆ ಮೂರು ಉತ್ಸವಗಳು, ಅವಕ್ಕೆ ಸಿಕ್ಕುತ್ತಿದ್ದ ಚರುಪು, ಮತ್ತೆ ಹಗಲೆಲ್ಲ ಉಯ್ಯಾಲೆ ಆಟ!

****

ಈ ವಾರ ಚಿತ್ರಾ ಪೂರ್ಣಿಮೆ. ಊರಿನಲ್ಲಿ ತೇರು ಎಂದಾಗ, ಈ ನೆನಪೆಲ್ಲ ಮತ್ತೆ ಮತ್ತೆ ಮರುಕಳಿಸಿ ಬಂತು. ನೆನಪುಗಳ ಮಾತು ಮಧುರ. ಅಲ್ಲವೆ?

-ನೀಲಾಂಜನ

This week is Chitra Poornime - Annual Rathotsava time at my native village, which brings back a host of memories every year ....

Reblogged from ಅಲ್ಲಿದೆ ನಮ್ಮ ಮನೆ:

ನನ್ನೂರ ಸುತ್ತ ಮುತ್ತ ದೇವಸ್ಥಾನಗಳಿಗೇನೂ ಕೊರತೆ ಇಲ್ಲ. ಹನ್ನೊಂದರಿಂದ ಹದಿನಾಕನೇ ಶತಮಾನದವರೆಗೆ ಹೊಯ್ಸಳರು ನಿರ್ಮಿಸಿರುವ ಅತಿ ಸುಂದರ ದೇವಾಲಯಗಳು ಇಲ್ಲಿವೆ. ಅದೇ ಕಾರಣಕ್ಕೆ ಎಲ್ಲೆಲ್ಲಿ ಹೋದರೂ, ಚಿಕ್ಕ ಪುಟ್ಟ ಹಳ್ಳಿಗಳಲ್ಲೂ ಶಿಲಾಶಾಸನಗಳೂ ಕಂಡುಬರುತ್ತವೆ.

ಸಾವಿರ ವರ್ಷಗಳಿಂದಲೂ ನಮ್ಮ ಊರವರು ಮರೆಯದ ಒಂದು ಹೆಸರೆಂದರೆ ಅದು ಶಾಂತಲೆಯದು. ಒಬ್ಬ ರಾಣಿಯಾಗಿ, ಒಬ್ಬ ಕಲೆಗಾರ್ತಿಯಾಗಿ ಅವಳು ಎಲ್ಲರ ಮನದಲ್ಲಿ ನಿಂತುಬಿಟ್ಟಿದ್ದಾಳೆ. ಹಳೇಬೀಡಿನ, ಬೇಲೂರಿನ ದೇವಾಲಯದಲ್ಲಿ ಹೋದವರು ಯಾರೂ ದೇವರೆದುರಿಗಿರುವ ನವರಂಗದ ನಡುವೆ ಇರುವ ಗುಂಡು ಜಗಲಿಯನ್ನು ತೋರಿಸಿ - ಶಾಂತಲೆ ನೃತ್ಯ ಮಾಡುತ್ತಿದ್ದಿದ್ದು ಇದೇ ಜಾಗದಲ್ಲಿ ಎಂದು ಹೇಳದೇ ಇರುವುದೇ ಇಲ್ಲ.  ಹಾಗೇ ಬೇಲೂರಿನ ದೇವಾಲಯದ ನಾಟ್ಯಸರಸ್ವತಿ ಎಂಬ ಹೆಸರಿನ ಶಿಲಾಬಾಲಿಕೆಯನ್ನು ಕೆತ್ತಲು ಶಾಂತಲೆಯೇ ಸ್ಫೂರ್ತಿ ಎಂದು ನುಡಿಯುತ್ತಾರೆ.

ಗೆಳೆಯರೊಬ್ಬರು ಕನ್ನಡದಲ್ಲಿರುವ ಶಾಸನ ಪದ್ಯಗಳ ಪುಸ್ತಕವೊಂದನ್ನು ಕೊಟ್ಟರು. ಅಲ್ಲಿ ಶಾಂತಲೆಯ ಬಗ್ಗೆ ಪದ್ಯವೊಂದು ಕಂಡಿತು. ಆ ಶಾಸನ ಸಿಕ್ಕಿದ್ದೂ ನಮ್ಮೂರಿನಲ್ಲೇ ಅನ್ನುವುದಿನ್ನೊಂದು ಹೆಚ್ಚಾಯ!

ಆ ಪದ್ಯ ಹೀಗಿದೆ:

ಸತತಂ ನೋೞ್ಪೊಡೆ ಲಕ್ಷೀ ದೇವತೆ ರಣವ್ಯಾಪಾರದೊಳ್ ಖೞ್ಗ ದೇ
ವತೆ ಬಿಣ್ಪಿಂದಮೆ ಭೂಮಿದೇವತೆ ಜನಕ್ಕೆಲ್ಲಂದದಿಂ ಪುಣ್ಯ ದೇ
ವತೆ ವಾಗ್ದೇವತೆ ವಿದ್ಯೆಯೊಳ್ ಸಕಲ ಕಾರ್ಯೋದ್ಯೋಗದೊಳ್ ಮಂತ್ರ ದೇ
ವತೆ ನಾಥಂಗೆ ಶಾಂತಿದೇವಿಯನದಿನ್ನೇ ವಣ್ಣಿಪಂ ಬಣ್ಣಿಪಂ!

"ನೋಡಲು ಲಕ್ಷ್ಮಿಯ ಸೊಬಗಿನ,  ಕಾಳಗದಲ್ಲಿ ಹೋದರೆ ಸಾಕ್ಷಾತ್ ಖಡ್ಗವನ್ನು ಹಿಡಿದ ದೇವತೆಯಂತೆ ಕಾಣುವ, ಹಿರಿಮೆಯಲ್ಲಿ ಸಾಕ್ಷಾತ್ ಭೂಮಿ ತೂಕದ, ಅಂದದಲ್ಲಿ ಪುಣ್ಯದೇವತೆಯ, ತಿಳಿವಿನಲ್ಲಿ ಸರಸ್ವತಿಯ ಹೋಲುವ, ಎಲ್ಲ ಕಾರ್ಯಗಳಲ್ಲೂ  ಗಂಡನಿಗೆ ಮಂತ್ರಿಯಂತೆ ಸಲಹೆಕೊಡುವ ಆ ಶಾಂತಿದೇವಿಯನ್ನು ಹೇಗೆ ತಾನೇ ಹೊಗಳಲು ಸಾಧ್ಯ?"

ಇಂತಹ ಆಳುವವರಿದ್ದ ಊರು ನನ್ನದು ಅನ್ನುವುದೇ ಒಂದು ಹೆಮ್ಮೆಯ ಮಾತು ನನಗೆ. ಅದಕ್ಕೇ ಬ್ಲಾಗ್ ನ ತಲೆ ಬರಹದ ಚಿತ್ರದಲ್ಲಿ ಇವತ್ತು ಈ ಪದ್ಯವೇ ಕಾಣುತ್ತಿದೆ.

-ನೀಲಾಂಜನ

Reblogging this post about a woman I admire, just in time for the International Women's Day on March 8th:

Reblogged from ಅಲ್ಲಿದೆ ನಮ್ಮ ಮನೆ:

Click to visit the original post

In 2009, I posted a swarajati that I had composed during Navaratri. Last year too, I posted another swarajati, in ranjani raaga,  during Navaratri.  Now to continue the tradition, I am posting another swarajati that I composed sometime back - This is in raaga BindumAlini.

You can download a PDF file, by clicking here:  bindumaalini

An audio track is available here - played on the flute, by @IndianMusicFan.

Read more… 19 more words

Now that I have an audio track for the composition, thought of re-posting this old post:-)

Nataka Chaitra

Hits

  • 189,427

Buy My book “Hamsanada”

A Collection of  Samskrta Subhashitas, translated to Kannada

http://www.saarangamedia.com/product/hamsanada

My Book, on Google Play!

My Book Hamsanada, on Google Play

My Book Hamsanada, on Google Play

Enter your email address to follow this blog and receive notifications of new posts by email.

Join 868 other followers

Top Rated

ಅವಧಿಯಲ್ಲಿ ಹೀಗಂದರು:

"ಅಲ್ಲಿದೆ ನಮ್ಮ ಮನೆ…ಇಲ್ಲಿ ಬಂದೆ ಸುಮ್ಮನೆ… ಎಂಬ ಘೋಷ ವಾಕ್ಯದೊಂದಿಗೆ ಬ್ಲಾಗ್ ಮಂಡಲದಲ್ಲಿ ಕಾಣಿಸಿಕೊಂಡವರು ನೀಲಾಂಜನ. ಅಲ್ಲಿದೆ ನಮ್ಮ ಮನೆ ಕನ್ನಡದ ಪರಿಮಳವನ್ನು ಇಂಗ್ಲಿಷ್ ನಲ್ಲಿ ಹರಡುತ್ತಾ ಇದೆ. ಕನ್ನಡದ ವಚನಗಳು, ಸಂಸ್ಕೃತ ಸುಭಾಷಿತಗಳು ಜೊತೆಯಲ್ಲೇ ಸಂಗೀತ ಹೀಗೆ ಹಲವು ಲೋಕವನ್ನು ಈ ಬ್ಲಾಗ್ ಪರಿಚಯಿಸಿದೆ." ಅವಧಿ, ಮೇ ೧೫, ೨೦೦೮
May 2013
M T W T F S S
« Apr    
 12345
6789101112
13141516171819
20212223242526
2728293031  

ಬಗೆ ಬಗೆ ಬರಹ

about.me

Ramaprasad K V

Ramaprasad K V

ಕನ್ನಡಿಗ. Musicphile. Bibliophile. Astrophile. Blogophile. Twitterphile.

Archives

Follow

Get every new post delivered to your Inbox.

Join 868 other followers