This week is Chitra Poornime – Annual Rathotsava time at my native village, which brings back a host of memories every year ….

ಅಲ್ಲಿದೆ ನಮ್ಮ ಮನೆ

ನಾನು ಚಿಕ್ಕವನಾಗಿದ್ದಾಗಿಂದ ಪರೀಕ್ಷೆ ಮುಗಿದು ಬರುವ ಬೇಸಿಗೆ ರಜೆಗೆ ಕಾಯುತ್ತಿರುತ್ತಿದ್ದೆ. ಏಕೆಂದರೆ, ವರ್ಷದಲ್ಲಿ ಒಮ್ಮೆ ಮಾಡುತ್ತಿದ್ದ ರೈಲ್ವೆ ಪ್ರಯಾಣ ಆಗ ಬರುತ್ತಿತ್ತು. ಎಲ್ಲ ಮಕ್ಕಳಿಗೂ, ರೈಲು ಪ್ರಯಾಣ ಎಂದರೆ ಹೆಚ್ಚೇ ಆಸೆ ಎಂದು ನನ್ನೆಣಿಕೆ. ಆದರೆ, ನನ್ನ ಈ ರೈಲು ಪ್ರಯಾಣ ಮಾತ್ರ ಬಹಳ ದೂರದ್ದಾಗಿರಲಿಲ್ಲ. ಆಗ ನಮ್ಮ ಊರಿಗೆ, (ಎಂದರೆ, ನನ್ನ ಪೂರ್ವಿಕರ ಊರಿಗೆ), ನನ್ನ ಊರಿಂದ (ಎಂದರೆ ಯಾವಾಗಲೂ ಯಾವಾಗಲೂ ನನ್ನ ಊರು ಯಾವುದು ಎಂದು ನಾನೆಂದುಕೊಳ್ಳುತ್ತೇನೋ) ಇದ್ದದ್ದು ಬರೀ ರೈಲು ಮಾತ್ರ. ಅರಸೀಕೆರೆಯಿಂದ ಮೈಸೂರಿಗೆ ಹೋಗುವ ದಾರಿಯಲ್ಲಿ ಐದು ಆರು ಮೈಲಿ ದಾಟಿ ಸಿಕ್ಕುತ್ತಿದ್ದಿದ್ದೇ ನಮ್ಮ ಹಳ್ಳಿ. ನಮ್ಮ ಅಜ್ಜ ಅಜ್ಜಿ ವಾಸ ಮಾಡುತ್ತಿದ್ದ ಮನೆ ಇದೆ ಅಲ್ಲಿ. ನನಗೆ ನೆನಪಿದ್ದಾಗಿನಿಂದ, ಅವರು ನಮ್ಮ ಮನೆಯಲ್ಲೇ ಇದ್ದುದ್ದರಿಂದ, ನನಗೆ ಅದು ಅಜ್ಜ-ಅಜ್ಜಿ ಮನೆ ಅನ್ನಿಸದೇ, ಒಂದು ರಜಾ ಕಾಲದ ಮನೆಯಾಗಿರುತ್ತಿತ್ತು.

ಈ ಹದಿನೈದು ನಿಮಿಷದ ರೈಲು ಪ್ರಯಾಣಕ್ಕೆ ಯಾಕಪ್ಪಾ ಅಷ್ಟು ಉತ್ಸಾಹ ಎಂದಿರಾ? ಇನ್ನೆಲ್ಲಿಗೆ ಹೋಗಬೇಕಾಗಿದ್ದರೂ ಬಸ್ಸನ್ನೇ ಹಿಡಿಯುತ್ತಿದ್ದ ನಾವು ಇಲ್ಲಿಗೆ ಮಾತ್ರ ರೈಲು ಹಿಡಿಯುತ್ತಿದ್ದಿದ್ದು ಒಂದಾದರೆ, ಹಳ್ಳಿಯಲ್ಲಿ ಹೋಗಿ ಆರೆಂಟು ದಿನ ಇರುತ್ತೇವಲ್ಲ ಎನ್ನುವುದು ಇನ್ನೊಂದು ಕಾರಣ ಇರಬೇಕು. ಮತ್ತೆ ಅದಕ್ಕಿಂತ ಹೆಚ್ಚಿಗೆ, ಊರಿನಲ್ಲಿದ್ದ ನಮ್ಮ ಮನೆಯಲ್ಲಿ ವರ್ಷ ಪೂರ್ತಿ ಯಾರೂ ವಾಸ ಇರುತ್ತಿದ್ದಿಲ್ಲ. ಅದಕ್ಕೆ, ನಾವು ಎಂಟು ದಿನ ಒಂದು ಸಂಸಾರ ನಡೆಸಬೇಕಾದರೆ ಬೇಕಾಗುವಷ್ಟು ವಸ್ತುಗಳೆಲ್ಲ – ಅಂದರೆ ಪಾತ್ರೆ ಪರಟಿ, ದವಸ ದಿನಸಿ, ಉಪ್ಪು ಮೆಣಸು ಪ್ರತಿಯೊಂದನ್ನೂ ಕಟ್ಟಿಕೊಂಡು ಹೊರಡುತ್ತಿದ್ದೆವು. ಅದರ ಸಂಭ್ರಮವೇ ಸಂಭ್ರಮ…

View original post 373 more words

Advertisements